ADVERTISEMENT

ವಿಜಯಪುರ: ಕೋವಿಡ್-19 ಸೋಂಕು ತಗುಲಿದ್ದ ವ್ಯಕ್ತಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 11:19 IST
Last Updated 16 ಜುಲೈ 2020, 11:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಯದಿಂದ 57 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಜೋರಾಪುರಪೇಟೆ ನಿವಾಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಅನಾರೋಗ್ಯದ ಕಾರಣದಿಂದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್-19 ತಗುಲಿರುವುದು ದೃಢವಾಗಿತ್ತು. ಹೀಗಾಗಿ ಕೋವಿಡ್ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು.

ADVERTISEMENT

ಕೋವಿಡ್ ಜಿಲ್ಲಾಸ್ಪತ್ರೆಗೆ ದಾಖಲಾಗುವ ಮುನ್ನ ಮನೆಗೆ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.