ADVERTISEMENT

ಕೋವಿಡ್‌ ಎರಡನೇ ಅಲೆ: ಹಬ್ಬಗಳ ಆಚರಣೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 18:33 IST
Last Updated 25 ಮಾರ್ಚ್ 2021, 18:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ ಮುಂಬರುವ ಯುಗಾದಿ, ಹೋಳಿ, ಷಬ್‌–ಎ–ಬರಾತ್, ಗುಡ್‌ ಫ್ರೈಡೇ ಹಬ್ಬಗಳ ಆಚರಣೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನಗಳು, ಉದ್ಯಾನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಆಚರಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.

ಈ ಸಂಬಂಧ ಬಿಬಿಎಂಪಿ ಆಯುಕ್ತರು ಮತ್ತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು. ಯಾರಾದರೂ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.