ADVERTISEMENT

ರಾಜ್ಯದಲ್ಲಿ ರೆಮ್‌ಡಿಸಿವಿರ್ ಕೊರತೆಗೆ ಕೇಂದ್ರದ ಮಲತಾಯಿ ಧೋರಣೆ ಕಾರಣ: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 9 ಮೇ 2021, 12:24 IST
Last Updated 9 ಮೇ 2021, 12:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌–19 ಚಿಕಿತ್ಸೆಯಲ್ಲಿ ಬಳಸುವ ರೆಮ್‌ಡಿಸಿವಿರ್ ಔಷಧದ ಕೊರತೆ ರಾಜ್ಯದಲ್ಲಿ ಉಂಟಾಗಲು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

‘ರಾಜ್ಯದಲ್ಲಿ ರೆಮ್‌ಡಿಸಿವಿರ್ ಕೊರತೆ ಎದುರಾಗಿ ತಿಂಗಳಾಗಿದೆ. ಇನ್ನೂ ಕೂಡ ಸಮಸ್ಯೆ ಬಗೆಹರಿದಿಲ್ಲ. ಕರ್ನಾಟಕದವರೇ ಆದ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅವರೇ ಫಾರ್ಮಾಸೂಟಿಕಲ್ಸ್ ವಿಭಾಗವನ್ನೂ ನಿಭಾಯಿಸುತ್ತಿದ್ದಾರೆ. ಆದರೂ ರಾಜ್ಯಕ್ಕೆ ನ್ಯಾಯ ಒದಗಿಸಲಾಗದ್ದು ಇವರ ಅಸಾಮರ್ಥ್ಯಕ್ಕೆ ಸಾಕ್ಷಿ. ರಾಜ್ಯದ ಬಿಜೆಪಿ ನಾಯಕರ ಹೇಡಿತನವೇ ಕೇಂದ್ರದ ಮಲತಾಯಿ ಧೋರಣೆಗೆ ಕಾರ’ ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಅಕ್ರೋಶ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.