ADVERTISEMENT

ಮೈಸೂರು: 14ಕ್ಕೇರಿದ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಕೋವಿಡ್– 19

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2020, 19:57 IST
Last Updated 31 ಮಾರ್ಚ್ 2020, 19:57 IST
ಕೊರೊನಾ
ಕೊರೊನಾ   

ಮೈಸೂರು: ನಂಜನಗೂಡಿನ ಔಷಧ ಕಾರ್ಖಾನೆಯ ಮತ್ತಿಬ್ಬರು ನೌಕರರಲ್ಲಿ ಕೋವಿಡ್‌ 19 ಇರುವುದು ಮಂಗಳವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14ಕ್ಕೇರಿದ್ದು, ಇದರಲ್ಲಿ 12 ಮಂದಿ ಔಷಧ ಕಾರ್ಖಾನೆಯ ನೌಕರರು.

ಕಾರ್ಖಾನೆಯ ಗುಣಮಟ್ಟ ನಿಯಂತ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮೈಸೂರಿನ ವ್ಯಕ್ತಿಗೆ ಸೋಂಕು ಮಾರ್ಚ್‌ 26 ರಂದು ದೃಢ
ಪಟ್ಟಿತ್ತು. ಅವರ ಸಂಪರ್ಕಕ್ಕೆ ಬಂದಿದ್ದ ‌11 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

‘ಸೋಂಕಿತರ ಜತೆ ಸಂಪರ್ಕಕ್ಕೆ ಬಂದಿದ್ದವರ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.