ADVERTISEMENT

ಕೋವಿಡ್| ವೈದ್ಯ ಬಾಲಾಜಿ ಪ್ರಸಾದ್ ಅವರಿಗೆ ₹ 25 ಲಕ್ಷ ನೆರವು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 18:46 IST
Last Updated 3 ನವೆಂಬರ್ 2020, 18:46 IST

ಬೆಂಗಳೂರು: ಕೋವಿಡ್ ಪೀಡಿತರಾಗಿರುವ ನಗರದ ಮೂತ್ರಪಿಂಡ ತಜ್ಞ ಡಾ. ಬಾಲಾಜಿ ಪ್ರಸಾದ್ ಅವರಿಗೆ ಹೆಚ್ಚಿನ ಚಿಕಿತ್ಸೆ ಒದಗಿಸಲು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹ 25 ಲಕ್ಷ ನೆರವು ನೀಡಲು ಸರ್ಕಾರ ನಿರ್ಧರಿಸಿದೆ.

ಅವರು 100ಕ್ಕೂ ಅಧಿಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಈ ನಡುವೆ ಅವರಿಗೂ ಕೊರೊನಾ ಸೋಂಕು ತಗಲಿದ್ದು, ಶೇಷಾದ್ರಿಪುರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 37 ದಿನಗಳಿಂದ ಆಸ್ಪತ್ರೆಯಲ್ಲಿ ಇರುವ ಅವರಿಗೆ, 26 ದಿನಗಳಿಂದ ವೆಂಟಿಲೇಟರ್ ಸಂಪರ್ಕ ಕಲ್ಪಿಸಲಾಗಿದೆ. ಶ್ವಾಸಕೋಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ತುರ್ತಾಗಿ ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚ ಆಗಲಿದ್ದು, ಅವರ ಕುಟುಂಬವು ಕಂಗಾಲಾಗಿದೆ. ಡಾ. ಬಾಲಾಜಿ ಪ್ರಸಾದ್ ಅವರ ಶಸ್ತ್ರಚಿಕಿತ್ಸಾ ವೆಚ್ಚದ ಬಗ್ಗೆ ಮಾಹಿತಿ ಪಡೆದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಈ ಪ್ರಕರಣ
ವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಮನಕ್ಕೆ ತಂದಿದ್ದರು. ಈಗ ಸರ್ಕಾರವು ಅಗತ್ಯ ನೆರವು ನೀಡಲು ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.