ಕೊರೊನಾ ವೈರಾಣು– ಸಾಂಕೇತಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂಬತ್ತು ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರಾಣು ಪತ್ತೆ ಸಂಬಂಧ 24 ಗಂಟೆಗಳಲ್ಲಿ 96 ಆರ್‌ಟಿ–ಪಿಸಿಆರ್ ಸೇರಿ 104 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 8.65 ರಷ್ಟಿದೆ. ಸಕ್ರಿಯ ಪ್ರಕರಣಗಳಲ್ಲಿ 46 ಮಂದಿ ಮನೆ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈ ವರ್ಷ 98 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ 50 ಮಂದಿ ಈಗಾಗಲೇ ಚೇತರಿಸಿಕೊಂಡಿದ್ದಾರೆ. ಸೋಂಕಿತರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.