ADVERTISEMENT

ಗುತ್ತಿಗೆ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಹೆಚ್ಚುವರಿ ಭತ್ಯೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 20:13 IST
Last Updated 21 ಸೆಪ್ಟೆಂಬರ್ 2020, 20:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು:ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆಯುಷ್‌ ಮತ್ತು ಎಂಬಿಬಿಎಸ್‌ ವೈದ್ಯರು, ತಜ್ಞರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಸೇವಾ ಸಿಬ್ಬಂದಿಗೆ ರಾಜ್ಯ ಸರ್ಕಾರವು ಕೋವಿಡ್‌ ವಿಶೇಷ ಹೆಚ್ಚುವರಿ ಭತ್ಯೆ ನೀಡಲಿದೆ. ಮುಂದಿನ 6 ತಿಂಗಳು ಅವಧಿಗೆ ಮಾತ್ರ ಈ ಹೆಚ್ಚುವರಿ ಭತ್ಯೆ ನೀಡಲಾಗುತ್ತದೆ.

ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಲು 14,252 ಆರೋಗ್ಯ ಸೇವಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಸಿಬ್ಬಂದಿ ಸಂಖ್ಯೆ ಕಡಿಮೆ ಬಿದ್ದರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮತಿಯೊಂದಿಗೆ ಜಿಲ್ಲಾಮಟ್ಟದ ಆಯ್ಕೆಸಮಿತಿಯು ತಾತ್ಕಾಲಿಕವಾಗಿ ಈ ಹುದ್ದೆಗಳನ್ನುತುಂಬಿಕೊಳ್ಳಬಹುದಾಗಿದೆ.

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸೇವಾ ಸಿಬ್ಬಂದಿಯು ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ವೇತನ ಹೆಚ್ಚಿಸುವ ಬದಲಿಗೆ,ಕೋವಿಡ್‌ ವಿಶೇಷ ಭತ್ಯೆ ನೀಡಲು ಸರ್ಕಾರ ಮುಂದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.