ADVERTISEMENT

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಿಗೆ ಕೋವಿಡ್: ವಿದೇಶಿ ಪ್ರಯಾಣಿಕರ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 15:57 IST
Last Updated 27 ನವೆಂಬರ್ 2021, 15:57 IST
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶಿಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶಿಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ   

ದೇವನಹಳ್ಳಿ: ವಿಶ್ವದ ಕೆಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಒಮಿಕ್ರಾನ್ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಭೇಟಿ ನೀಡಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದ್ದಾರೆ. ಹೊರದೇಶಗಳಿಂದ ಬರುವಂತಹ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸುವಂತೆ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹತ್ತು ದೇಶಗಳ ಪ್ರಯಾಣಿಕರ ಮೇಲೆ ನಿಗಾ
ದಕ್ಷಿಣ ಆಫ್ರಿಕಾ ಸೇರಿದಂತೆ ಹತ್ತು ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಈ ದೇಶಗಳಿಂದ ನವೆಂಬರ್‌ 1ರಿಂದ ಇಲ್ಲಿಯವರೆಗೆ ಬೆಂಗಳೂರಿಗೆ 584 ಮಂದಿ ಪ್ರಯಾಣಿಕರು ಬಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ 94 ಮಂದಿ ಪ್ರಯಾಣಿಕರು ಬಂದಿದ್ದಾರೆ. 94 ಪ್ರಯಾಣಿಕರ ಪೈಕಿ ಇಬ್ಬರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.