ADVERTISEMENT

ಕೋವಿಡ್‌–19: ಮುಖ್ಯಮಂತ್ರಿ ಮನೆ ಪ್ರವೇಶಕ್ಕೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 5:44 IST
Last Updated 16 ಮಾರ್ಚ್ 2020, 5:44 IST
ಬಿ.ಎಸ್.ಯಡಿಯೂರಪ್ಪ ನಿವಾಸ ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತಿದೆ
ಬಿ.ಎಸ್.ಯಡಿಯೂರಪ್ಪ ನಿವಾಸ ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುತ್ತಿದೆ   

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಪರಿಶೀಲಿಸಿ ಒಳಗೆ ಪ್ರವೇಶ ನೀಡಲಾಗುತ್ತಿದೆ.

ವೇಗವಾಗಿ ಹರಡುತ್ತಿರುವ ಕೋವಿಡ್‌–19 ಸೋಂಕು ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ದವಳಗಿರಿ ನಿವಾಸದ ಎದುರು ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 1,20,000 ಸಾವಿರ ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.