ಬೆಂಗಳೂರು: ನಗರದಲ್ಲಿ ನಕಲಿ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ₹ 56 ಲಕ್ಷ ಮೌಲ್ಯದ ನಕಲಿ ಸ್ಯಾನಿಟೈಸರ್ ಜಪ್ತಿ ಮಾಡಿದ್ದಾರೆ.
ರಾಜು ಹಾಗೂ ಚಂದನ್ ಬಂಧಿತರು. ಜ್ಯೋತಿ ಕೆಮಿಕಲ್ಸ್ ಹಾಗೂ ಸ್ವಾತಿ ಆ್ಯಂಡ್ ಕಂಪನಿಗಳ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.
ಗೋದಾಮಿನಲ್ಲಿ ನಕಲಿ ಸ್ಯಾನಿಟೈಸರ್ ಹಾಗೂ ಹ್ಯಾಂಡ್ ರಬ್ ಸಿದ್ದಪಡಿಸಲಾಗುತ್ತಿತ್ತು. ಈ ಸಂಬಂಧ ಚಾಮರಾಜಪೇಟೆ ಹಾಗೂ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.