ADVERTISEMENT

ಬಿಜೆಪಿ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಹೋರಾಟ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2022, 18:24 IST
Last Updated 20 ಜನವರಿ 2022, 18:24 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಕೋವಿಡ್ ನಿಯಮ ಉಲ್ಲಂಘಿಸಿದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವ ವಿಷಯದಲ್ಲಿ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಸ್ಪಂದಿಸಿದ್ದಾರೆ. ನಿಯಮ ಉಲ್ಲಂಘಿಸಿರುವ ಎಲ್ಲ ಬಿಜೆಪಿ ನಾಯಕರ ವಿರುದ್ಧ ಕ್ರಮ ಜರುಗಿಸದಿದ್ದರೆ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕೇವಲ ನಮ್ಮ ಪಕ್ಷದ ನಾಯಕರ
ವಿರುದ್ಧ ಪ್ರಕರಣ ದಾಖಲಿಸಿ, ಆಡಳಿತ ಪಕ್ಷದವರ ವಿರುದ್ಧ ಪ್ರಕರಣ ದಾಖಲಿಸದಿದ್ದರೆ, ಸುಮ್ಮನೆ ಕುಳಿತುಕೊಳ್ಳುವುದಿಲ್ಲ’ ಎಂದರು. ‘ಕೋವಿಡ್ ನಿಯಮ ವಿರುದ್ಧವಾಗಿ ನಡೆದುಕೊಂಡ ಎಲ್ಲರ ವಿರುದ್ಧ ಪ್ರಕರಣ ದಾಖಲಿಸುವುದು ಅಧಿಕಾರಿಗಳಿಗೆ ಬಿಟ್ಟ ವಿಚಾರ. ಅವರ ನಡೆ ನೋಡಿ, ಅವರ ವಿರುದ್ಧ ಹೇಗೆ ಹೋರಾಟ ಮಾಡಬೇಕೆಂದು ತೀರ್ಮಾನಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT