ADVERTISEMENT

Covid-19 Karnataka Update | 2,228 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,373

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 19:32 IST
Last Updated 9 ಜುಲೈ 2020, 19:32 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ರಾಜ್ಯದಾದ್ಯಂತ 2,228 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ. ಇದುವರೆಗೆ 486 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 12, 884 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ 17, 782 ಸಕ್ರಿಯ ಪ್ರಕರಣಗಳು ಇವೆ.

ADVERTISEMENT

ಬೆಂಗಳೂರಿನಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು (1373) ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 177ಕ್ಕೆ ತಲುಪಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಚೇತರಿಸಿಕೊಂಡು ಮನೆಗೆ ಹೋಗುವವರ ಸಂಖ್ಯೆ ಕೂಡ ಏರಿಕೆಯಾಗಿದೆ. ಒಂದೇ ದಿನಬೆಂಗಳೂರಿನಲ್ಲಿ 606 ಸೇರಿದಂತೆ 957 ಮಂದಿ ಚೇತರಿಸಿಕೊಂಡು ಆಸ್ಪ‍ತ್ರೆಯಿಂದ ಮನೆಗೆ ತೆರಳಿದ್ದಾರೆ. ಒಟ್ಟು ಸೋಂಕಿತ
ರಲ್ಲಿ 2,834 ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ- 167, ಕಲಬುರ್ಗಿ- 85, ಧಾರವಾಡ- 75, ಮೈಸೂರು- 52, ಬಳ್ಳಾರಿ- 41, ದಾವಣಗೆರೆ- 40, ಶಿವಮೊಗ್ಗ- 37, ಬಾಗಲಕೋಟೆ- 36, ಕೋಲಾರ- 34, ಚಿಕ್ಕಬಳ್ಳಾಪುರ- 32 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ.

20 ಸಾವಿರ ಪರೀಕ್ಷೆ: ಗುರುವಾರ ಒಂದೇ ದಿನ 20,028 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ ಒಂದು ದಿನ ನಡೆಸಿದ ಗರಿಷ್ಠ ಪರೀಕ್ಷೆಗಳು ಇವಾಗಿವೆ. ಪರಿಣಾಮ ರಾಜ್ಯದ 30 ಜಿಲ್ಲೆಗಳಲ್ಲಿಯೂ ಹೊಸದಾಗಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮತ್ತೆ1,373 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.