ADVERTISEMENT

ಖಡಕ್‌ ಎಚ್ಚರಿಕೆ ನೀಡಿದ ಯಡಿಯೂರಪ್ಪ: ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 10:13 IST
Last Updated 7 ಏಪ್ರಿಲ್ 2020, 10:13 IST
   

ಬೆಂಗಳೂರು: ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜ ಒಡೆಯುವ ಕೆಲಸ ಮಾಡುವವರನ್ನು ಸಹಿಸುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಬಲಿಸಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ, ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಯಡೆಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಅದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಇಂದು ಟ್ವೀಟ್‌ ಮಾಡಿರುವ ಅವರು, 'ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ,ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಅವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯ ಬೇಕೆಂದು ಆಗ್ರಹಿಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಮುದಾಯವೊಂದನ್ನು ಗುರಿಯಾಗಿಸಿ ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದವರನ್ನು ಸಹಿಸುವುದಿಲ್ಲ. ಅವರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.