ADVERTISEMENT

ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುತ್ತಿದೆ: ಎಚ್‌ಡಿಕೆ ಗಂಭೀರ ಆರೋಪ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 10:09 IST
Last Updated 24 ಏಪ್ರಿಲ್ 2020, 10:09 IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ   

ಮಂಡ್ಯ: 'ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದ್ದು ಕೊರೊನಾ ಸೋಂಕು ಶಂಕಿತರನ್ನು ರಾಮನಗರಕ್ಕೆ ಕರೆತಂದು ಹುಡುಗಾಟ ಪ್ರದರ್ಶನ ಮಾಡಿದೆ' ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಮನಗರ ಕಾರಾಗೃಹಕ್ಕೆ ಕರೆತಂದಿದ್ದ ಐವರಲ್ಲಿ ಕೋವಿಡ್ 19 ಪತ್ತೆಯಾಗಿದೆ. ಆದರೆ ಮೂವರ ಪ್ರಕರಣ ಮುಚ್ಚಿ ಹಾಕಲು ಸರ್ಕಾರವೇ ಯತ್ನಿಸಿದೆ ಎಂದು ಆರೋಪಿಸಿದರು.

'ಕೋವಿಡ್ ಪ್ರಕರಣಗಳಲ್ಲಿ ಸರ್ಕಾರ ದುಡ್ಡು ಹೊಡೆಯುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ' ಎಂದರು.

ADVERTISEMENT

'ಶ್ರೀರಂಗಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾವೊಬ್ಬ ಅಧಿಕಾರಿಯೂ ಅವರ ಆರೋಗ್ಯ ವಿಚಾರಿಸಿಲ್ಲ' ಎಂದು ದೂರಿದರು.

ಪ್ರಜಾವಾಣಿ ವರದಿ ಪ್ರಸ್ತಾಪ

'ಪ್ರಜಾವಾಣಿ ಪತ್ರಿಕೆ ಸರ್ಕಾರದ ನಿಷ್ಕಾಳಜಿಯನ್ನು ಎತ್ತಿ ಹಿಡಿದಿದೆ. ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಕುಟುಂಬವೊಂದು ಗುಹೆಯಲ್ಲಿ ವಾಸ ಮಾಡುತ್ತಿತ್ತು. ಸರ್ಕಾರದ ನಿರ್ಲಕ್ಷ್ಯ ಇದರಿಂದ ಗೊತ್ತಾಗಿದೆ' ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.