ADVERTISEMENT

ಎರಡು ದಿನಗಳಲ್ಲಿ ಖಾಸಗಿ ಬಸ್‌ಗಳು ಸಂಚಾರ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 22 ಮೇ 2020, 10:57 IST
Last Updated 22 ಮೇ 2020, 10:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ರಾಯಚೂರು: 'ಎರಡು ದಿನಗಳಲ್ಲಿ ಖಾಸಗಿ ಬಸ್‌ಗಳ ಸಂಚಾರ ಕೂಡಾ ಆರಂಭವಾಗಲಿವೆ. ಶೇ 15 ರಷ್ಟು ದರ ಏರಿಕೆಗೆ ಅವಕಾಶ ನೀಡಲಾಗಿದೆ' ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

'ಈ ಸಂಬಂಧ ಖಾಸಗಿ ವಾಹನಗಳ ಮಾಲೀಕರ ಸಂಘದೊಂದಿಗೆ ಸಭೆ ನಡೆದಿದ್ದು, ಶೇ 50 ದರ ಏರಿಕೆ ಬೇಡಿಕೆ ತಿರಸ್ಕರಿಸಲಾಗಿದೆ. ಸೋಂಕು ತಡೆಯಲು ಸರ್ಕಾರಿ ಬಸ್‌ಗಳಲ್ಲಿ ಅನುಸರಿಸುವ ಎಲ್ಲಾ ನಿಯಮಗಳನ್ನು ಖಾಸಗಿ ಬಸ್‌ಗಳಲ್ಲಿಯೂ ಅನುಸರಿಸಬೇಕು. ಕೆಂಪು ವಲಯ ಹಾಗೂ ಬಫರ್ ಜೋನ್ ಪ್ರದೇಶಗಳ ಪ್ರಯಾಣಿಕರನ್ನು ಕರೆದೊಯ್ಯದಂತೆ ತಿಳಿಸಲಾಗಿದೆ' ಎಂದರು.

'ಸೇವಾ ಮನೋಭಾವ ಇಟ್ಟುಕೊಂಡು ನಷ್ಟವಾದರೂ ಸರ್ಕಾರಿ ಬಸ್ ಸಂಚಾರ ಆರಂಭಿಸಿದ್ದೇವೆ. ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.

ADVERTISEMENT

ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.