ADVERTISEMENT

ಕೋವಿಡ್‌: 11,698 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 7.77ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2022, 13:29 IST
Last Updated 10 ಜನವರಿ 2022, 13:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 9,221 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದು, ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಅಸುನೀಗಿದ್ದಾರೆ.

ರಾಜ್ಯದಾದ್ಯಂತ 1,148 ಸೋಂಕಿತರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, 60,148 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೋವಿಡ್‌ ಪ್ರಕರಣಗಳ ಪಾಸಿಟಿವಿಟಿ ದರ ಶೇ 7.77ಕ್ಕೆ ಏರಿಕೆಯಾಗಿದೆ.

ಓಮೈಕ್ರಾನ್‌ ಪ್ರಕರಣಗಳ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ‘ಬೆಂಗಳೂರಿನಲ್ಲಿ ಇಂದು 146 ಹೊಸ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 479ಕ್ಕೆ ತಲುಪಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.