ADVERTISEMENT

ಕರ್ನಾಟಕ: 10 ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಮೃತರ ಸಂಖ್ಯೆ 164ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 18:05 IST
Last Updated 24 ಜೂನ್ 2020, 18:05 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಂದೇ ದಿನ 397 ಕೋವಿಡ್ ಪ್ರಕರ ಣಗಳು ವರದಿಯಾಗಿವೆ. ಇದರಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರದ ಗಡಿ (10,118) ದಾಟಿದೆ.

ಬೆಂಗಳೂರಿನಲ್ಲಿ ಐದು ಮಂದಿ ಸೇರಿದಂತೆ ಮತ್ತೆ 14 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಕೋವಿಡ್‌ಗೆ ಸಾವಿಗೀಡಾದವರ ಸಂಖ್ಯೆ 164ಕ್ಕೆ ತಲುಪಿದೆ.

ಕಲಬುರ್ಗಿಯಲ್ಲಿ 50 ಮಂದಿ ಸೇರಿದಂತೆ 149 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಟ್ಟು 112 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿ 75 ಮಂದಿ ಹೊರರಾಜ್ಯಗಳಿಂದ ಬಂದವರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಾದ59, 54, 70, 50 ವರ್ಷ ವಯಸ್ಸಿನ ನಾಲ್ವರು ಮಹಿಳೆ ಹಾಗೂ 68 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.