ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 3,976 ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ 11,377 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 41 ಮಂದಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ.
ರಾಜ್ಯದಲ್ಲಿ 44,571 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರವು ಶೇ 3.47 ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 1,725 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.