ADVERTISEMENT

Covid-19 Karnataka Update: 24 ಗಂಟೆಗಳಲ್ಲಿ 4,025 ಹೊಸ ಪ್ರಕರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಅಕ್ಟೋಬರ್ 2020, 15:17 IST
Last Updated 29 ಅಕ್ಟೋಬರ್ 2020, 15:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ 4,025 ಮಂದಿ ಹೊಸದಾಗಿ ಕೋವಿಡ್ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. 45 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ.

ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದ್ದು, ಬೆಂಗಳೂರಿನಲ್ಲಿ 4,378 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 7,661 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 7,41,219ಕ್ಕೆ ತಲುಪಿದೆ. 6,44,80 ಅಧಿಕ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಒಂದೇ ದಿನ 1,00,683 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಗರಿಷ್ಠ: ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ 2,175 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,33,037ಕ್ಕೆ ತಲುಪಿದೆ. ಮೈಸೂರು (204), ಬೆಳಗಾವಿ (42), ಬಳ್ಳಾರಿ (74), ಕಲಬುರಗಿ(35), ಧಾರವಾಡ (76), ದಕ್ಷಿಣ ಕನ್ನಡ (96), ದಾವಣಗೆರೆ (94), ಕೊಪ್ಪಳ(25) ಜಿಲ್ಲೆಗಳಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.