ADVERTISEMENT

Covid-19 Karnataka Update: 803 ಹೊಸ ಪ್ರಕರಣ, 17 ಸೋಂಕಿತರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಸೆಪ್ಟೆಂಬರ್ 2021, 14:27 IST
Last Updated 12 ಸೆಪ್ಟೆಂಬರ್ 2021, 14:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 803 ಹೊಸ ಪ್ರಕರಣಗಳು ವರದಿಯಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ.

ಈ ವರೆಗೂ ರಾಜ್ಯದಲ್ಲಿ ಒಟ್ಟು 29,61,735 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 29,07,548 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಂದೇ ದಿನ 803 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16,656 ಆಗಿದೆ.

ADVERTISEMENT

ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 37,504 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.