ADVERTISEMENT

ಕೊರೊನಾ ಹಿನ್ನೆಲೆ| ಪತ್ರಕರ್ತರಿಗೆ ₹25 ಲಕ್ಷ ಜೀವ ವಿಮಾ ಘೋಷಿಸಿ: ಎಚ್‌ಡಿಕೆ

ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 5:53 IST
Last Updated 28 ಏಪ್ರಿಲ್ 2020, 5:53 IST
   

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಮಂಗಳವಾರ ಟ್ವೀಟ್‌ ಮಾಡಿರುವ ಅವರು ಕೊರೊನಾ ಸೋಂಕಿನ ವಿರುದ್ದದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದ್ದಾರೆ.

ಪತ್ರಕರ್ತರು ತಮ್ಮ ಜೀವ ಲೆಕ್ಕಿಸಿದೇ ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅವರಿಗೆ ರಾಜ್ಯ ಸರ್ಕಾರ ಕನಿಷ್ಠ ಇಪ್ಪತ್ತೈದು ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

'ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ತಮ್ಮ ಜೀವ ಅಪಾಯದಲ್ಲಿದ್ದರೂ ಲೆಕ್ಕಿಸದೇ ಜನರಿಗೆ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು' ಎಂದು ಎಚ್‌ಡಿಕೆ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.