ADVERTISEMENT

ಕೋವಿಡ್‌-19: ರಾಯಚೂರಿನಲ್ಲಿ ಒಂದೇ ದಿನ 62 ಕೊರೊನಾ ಸೋಂಕು ಪ್ರಕರಣ

​ಪ್ರಜಾವಾಣಿ ವಾರ್ತೆ
Published 29 ಮೇ 2020, 7:57 IST
Last Updated 29 ಮೇ 2020, 7:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯಚೂರು: ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಸೋಂಕಿತರ ಸಂಖ್ಯೆ 72 ಕ್ಕೆ ತಲುಪಿತ್ತು. ಶುಕ್ರವಾರ ಬಂದಿರುವ ವರದಿಗಳಲ್ಲಿ ಮತ್ತೆ 62 ಜನರಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು ಸಂಖ್ಯೆ 134ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಿಂದ ಬಂದವರಲ್ಲಿಯೇ ಪಾಸಿಟಿವ್‌ ಪ್ರಕರಣಗಳು ಮುಂದುವರಿದಿವೆ. ಎಲ್ಲರೂ ಕ್ವಾರಂಟೈನ್‌ ಕೇಂದ್ರಗಳಲ್ಲಿದ್ದಾರೆ.

ಇನ್ನೂ ಮೂರು ಸಾವಿರ ಜನರ ವರದಿ ಬರಬೇಕಿದೆ. ಸೋಂಕಿತರ ಸಂಖ್ಯೆಯು ಗಣನೀಯ ಹೆಚ್ಚಳವಾಗಿರುವುದು ಆತಂಕ ಹೆಚ್ಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.