ಬೆಂಗಳೂರು:ಆರೋಗ್ಯ ಸಚಿವ ಶ್ರೀರಾಮುಲು ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ನನ್ನ ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೊರೊನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅವರು ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ' ಎಂದಿದ್ದಾರೆ.
ಶ್ರೀರಾಮುಲು ಮತ್ತು ತಮ್ಮ ನಡುವೆ ಮುನಿಸು ಕಾಣಿಸುಕೊಂಡಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿರುವ ಡಾ. ಸುಧಾಕರ್, 'ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮಗೆ ನಮ್ಮದೇ ಆದ ಜವಾಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ' ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.