ADVERTISEMENT

ಸಂಸದೆ ಸುಮಲತಾ ಅಂಬರೀಶ್‌ಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 13:05 IST
Last Updated 6 ಜುಲೈ 2020, 13:05 IST
ಸುಮಲತಾ
ಸುಮಲತಾ   

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, 'ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ' ಎಂದು ತಿಳಿಸಿದ್ದಾರೆ.

'ಇವತ್ತು (ಸೋಮವಾರ) ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿದ್ದೀನಿ' ಎಂದು ಅವರು ಹೇಳಿದ್ದಾರೆ.

ADVERTISEMENT

'ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ' ಎಂದು ಸುಮಲತಾ ಅಂಬರೀಷ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.