ADVERTISEMENT

ಮಾರ್ಗಸೂಚಿ ಪಾಲಿಸದಿದ್ದರೆ ಕಠಿಣ ಕ್ರಮ: ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ

ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:25 IST
Last Updated 21 ಏಪ್ರಿಲ್ 2021, 18:25 IST
ಆರ್‌. ಅಶೋಕ
ಆರ್‌. ಅಶೋಕ    

ಬೆಂಗಳೂರು: ಕರ್ಫ್ಯೂ ಅವಧಿಯಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ಇದ್ದರೆ, ಇನ್ನೂ ಕಠಿಣ ನಿಯಮಗಳನ್ನು ಜಾರಿ ಮಾಡುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಸೋಂಕಿನ ಸರಪಳಿ ಮುರಿಯಲು ಸಾರ್ವಜನಿಕರು ಮನೆಯಲ್ಲೇ ಇರಬೇಕು. ಅನಿವಾರ್ಯ ಇದ್ದರಷ್ಟೇ ಹೊರಗೆ ಬರಬೇಕು. 14 ದಿನಗಳಲ್ಲಿ ಸೋಂಕು ಸರಪಳಿ ಮುರಿದರೆ ಮುಂದೆ ಕಠಿಣ ಕ್ರಮಗಳ ಜಾರಿಯಿಂದ ತಪ್ಪಿಸಲುಕೊಳ್ಳಲು ಸಾಧ್ಯ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮುಂದಿನ ಎರಡು ತಿಂಗಳು ಹೆಚ್ಚು ಜಾಗ್ರತೆ ವಹಿಸಿ, ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸ
ಬೇಕಾಗಿದೆ.

ADVERTISEMENT

ಮಹಾರಾಷ್ಟ್ರ ಮತ್ತು ದೆಹಲಿ ಯಲ್ಲಿ ಕೋವಿಡ್‌ ತಾರಕಕ್ಕೆ ಏರಿದೆ. ಅಲ್ಲಿ ರೀತಿ ಇಲ್ಲಿ ಉಲ್ಬಣ ಆಗಬಾರದು ಎಂದು ಅವರು ತಿಳಿಸಿದರು.

ಕರ್ಫ್ಯೂ ಸಹಕಾರಿ: ಮೇ 4 ರವರೆಗಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಬಂದ್‌ನಿಂದ ಕೊರೊನಾ ಸೋಂಕಿನ ಸರಪಳಿ ಮುರಿಯಲು ಸಾಧ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ತಾಂತ್ರಿಕ ಸಲಹಾ ಸಮಿತಿಯ ತಜ್ಞರು ವೈಜ್ಞಾನಿಕ ಆಧಾರದ ಮೇಲೆ ನೀಡಿರುವ ಸಲಹೆಗಳ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ. ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.