ADVERTISEMENT

ಕೋವಿಡ್‌-19: ಸಕ್ರಿಯ ಪ್ರಕರಣಗಳು 50 ಸಾವಿರಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 19:20 IST
Last Updated 1 ನವೆಂಬರ್ 2020, 19:20 IST
ಕೋವಿಡ್‌ ಪತ್ತೆ ಪರೀಕ್ಷೆ ಚಿತ್ರ
ಕೋವಿಡ್‌ ಪತ್ತೆ ಪರೀಕ್ಷೆ ಚಿತ್ರ    

ಬೆಂಗಳೂರು: ರಾಜ್ಯದಲ್ಲಿ 18 ದಿನಗಳಿಂದ ಗುಣಮುಖರ ಸಂಖ್ಯೆಯು ಹೊಸಕೋವಿಡ್‌ ಪ್ರಕರಣಗಳನ್ನು ಮೀರಿಸಿದೆ. ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 50,592ಕ್ಕೆ ಇಳಿಕೆಯಾಗಿದೆ.

ಕಳೆದ ತಿಂಗಳು ಮೂರನೆ ವಾರ ಕಳೆಯುವವರೆಗೂ ಸಕ್ರಿಯ ಪ್ರಕರಣಗಳು ಲಕ್ಷದ ಗಡಿಯ ಆಸುಪಾಸಿನಲ್ಲಿತ್ತು. ಬಳಿಕ ಹೊಸ ಪ್ರಕರಣಗಳು ಹಾಗೂ ಗುಣಮುಖರ ಸಂಖ್ಯೆಯ ನಡುವೆ ಅಂತರ ಹೆಚ್ಚಿದ ಪರಿಣಾಮ ಸಕ್ರಿಯ ಪ್ರಕರಣಗಳು ಗಣನೀಯ ಇಳಿಕೆ ಕಂಡಿದೆ. ರಾಜ್ಯದಲ್ಲಿ ಭಾನುವಾರ 3,652 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8.27 ಲಕ್ಷಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಸದ್ಯ 935 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಂದೇ ದಿನ 86,378 ಆರ್‌ಟಿ–ಪಿಸಿಆರ್ ಸೇರಿದಂತೆ 1.06 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 80 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 2,167 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.38 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 147 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47 ಸಾವಿರ ದಾಟಿದೆ. ಹಾಸನ (144), ತುಮಕೂರು (104) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.