ADVERTISEMENT

ದ.ಆಫ್ರಿಕಾದಿಂದ ಬಂದ ಇಬ್ಬರಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 19:51 IST
Last Updated 27 ನವೆಂಬರ್ 2021, 19:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದೇವನಹಳ್ಳಿ:ದಕ್ಷಿಣ ಆಫ್ರಿಕಾದಿಂದ ಶನಿವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಇಬ್ಬರ ಸಂಪರ್ಕದಲ್ಲಿದ್ದ ಹತ್ತು ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾರಿಗೂ ಸೋಂಕು ತಗುಲಿಲ್ಲ. ಆದರೂ, ಎಲ್ಲರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ಸೋಂಕಿತರನ್ನು ವಿಮಾನ ನಿಲ್ದಾಣದಲ್ಲಿಯೇ ಕ್ವಾರೆಂಟೈನ್ ಮಾಡಲಾಗಿದ್ದು, ಅವರ ಗಂಟಲು ದ್ರವ ಮಾದರಿಯನ್ನು ವಂಶವಾಹಿ ಅನುಕ್ರಮಣಿಕೆ (ಜಿನೋಮ್ ಸೀಕ್ವೆನ್ಸಿಂಗ್‌)ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದೆ.

ADVERTISEMENT

ಒಂದು ವೇಳೆ ರೂಪಾಂತರಿ ವೈರಸ್ ಕಂಡು ಬಂದರೆ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಆಕಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.