ADVERTISEMENT

PHOTOS | ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ, ವಾಹನ ಸಂಚಾರ ವಿರಳ

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ವಿಜಯನಗರ, ಬೀದರ್, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ನಗರಗಳ ಪ್ರಮುಖ ರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ‌ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು.

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 9:10 IST
Last Updated 8 ಜನವರಿ 2022, 9:10 IST
ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಜನ, ವಾಹನ ಸಂಚಾರ ವಿರಳವಾಗಿತ್ತು
ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಜನ, ವಾಹನ ಸಂಚಾರ ವಿರಳವಾಗಿತ್ತು   
ಬೀದರ್ ನಗರದ ಪ್ರಮುಖ ರಸ್ತೆಗಳು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ
ಬೆಳಗಾವಿ ನಗರದ ಮುಖ್ಯ ರಸ್ತೆಗಳು, ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ.
ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಪೊಲೀಸರು ವಾಹನಗಳ ತಪಾಸಣೆ ನಡೆಸಿದರು
ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೇ ಬಂದ ಬೈಕ್ ಸವಾರರಿಗೆ ಹಾವೇರಿ ನಗರದಲ್ಲಿ ಶನಿವಾರ ಪೊಲೀಸರು ದಂಡ ಹಾಕಿದರು
ರಾಯಚೂರು ನಗರದಲ್ಲಿ ರಸ್ತೆ ಬಂದ್ ಮಾಡುತ್ತಿರುವ ಪೊಲೀಸರು
ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಜನರು ನೆರೆದಿದ್ದರು.
ನಗರದ ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಚೆಕ್‌ಪೋಸ್ಟ್‌ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಪೊಲೀಸ್‌ ಸಿಬ್ಬಂದಿ.
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಶನಿವಾರ ಸಾರ್ವಜನಿಕ ಸಂಚಾರ ವಿರಳವಾಗಿತ್ತು
ಮೈಸೂರಿನಲ್ಲಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.