ಬೆಂಗಳೂರು: ಕೋವಿಡ್ ಹಗರಣದ ತನಿಖೆಯ ಸಂಬಂಧ ರಚಿಸಲಾಗಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿಕುನ್ಹ ನೇತೃತ್ವದ ಆಯೋಗದ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮೈಕಲ್ ಡಿಕುನ್ಹ ನೇತೃತ್ವದ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು, ಒಂದು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ವರದಿಯನ್ನು ತುರ್ತಾಗಿ ಸಲ್ಲಿಸಬೇಕಾಗಿರುವ ಕಾರಣ, ಕೋವಿಡ್ ಹಗರಣದ ತನಿಖೆಯ ಅವಧಿಯನ್ನು ಜುಲೈ 31ರಿಂದ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 30ಕ್ಕೂ ಹೆಚ್ಚು ಜನರು ಸಾವಿಗೀಡಾದ ಪ್ರಕರಣವನ್ನು ಡಿಕುನ್ಹ ನೇತೃತ್ವದ ಆಯೋಗ ಪರಿಶೀಲಿಸಿ ವರದಿ ನೀಡಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.