ADVERTISEMENT

ಕೋವಿಡ್ ಸಮೀಕ್ಷೆ: 50 ದಾಟಿದ ಶಿಕ್ಷಕರಿಗೆ ವಿನಾಯಿತಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 4:20 IST
Last Updated 24 ಜುಲೈ 2020, 4:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗ ಹರಡುವಿಕೆ ನಿಯಂತ್ರಿಸುವ ಉದ್ದೇಶಕ್ಕಾಗಿ ರಚಿಸುತ್ತಿರುವ ವಾರ್ಡ್ ಮಟ್ಟದ ಕಣ್ಗಾವಲು ಪಡೆಯಲ್ಲಿ 50 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಅವರು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ಕೋವಿಡ್‌ ಆರೋಗ್ಯ ಸಮೀಕ್ಷಾ ಕಾರ್ಯಕ್ಕೆ ಅಂಗವಿಕಲರು, ಗರ್ಭಿಣಿಯರು ಹಾಗೂ 50 ವರ್ಷ ಮೇಲ್ಪಟ್ಟವರನ್ನು ನಿಯೋಜಿಸಬಾರದು ಎಂದು ಸರ್ಕಾರ ಈ ಹಿಂದೆಯೇ ಆದೇಶಿಸಿದೆ. ಆದರೂ ಬಿಬಿಎಂಪಿಯು, ಈ ವಯಸ್ಸಿನ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸುತ್ತಿರುವುದು ಶಿಕ್ಷಕ ಸಮುದಾಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT