ಬೆಂಗಳೂರು: ಮಾರ್ಚ್ 21 ರಿಂದ ಕಲಬುರ್ಗಿಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ್ದು, ಇದರಿಂದಾಗಿ ಕಲಬುರ್ಗಿಯಲ್ಲಿ ಕೋವಿಡ್-19 ಸೋಂಕು ತಗುಲಿರುವ ಶಂಕಿತರ ಪರೀಕ್ಷೆಗೆ ಆಗುತ್ತಿದ್ದ ವಿಳಂಬ ತಪ್ಪಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನೆರವಿನ ಈ ಪ್ರಯೋಗಾಲಯ ಕೇಂದ್ರವನ್ನು ಆರಂಭಿಸಲು ನವದೆಹಲಿಯಿಂದ ಈಗಾಗಲೇ ರೀಜೆಂಟ್ ಬಂದಿದ್ದು ಬೆಂಗಳೂರಿನಿಂದ ತಜ್ಞರ ತಂಡ ತೆರಳಿ ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.