ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಚಿಕಿತ್ಸೆ

ಚಿಕಿತ್ಸೆ ಮತ್ತು ಪರೀಕ್ಷಾ ದರ ಸರ್ಕಾರದಿಂದಲೇ ನಿಗದಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 19:30 IST
Last Updated 15 ಜೂನ್ 2020, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಪರೀಕ್ಷೆ ಮತ್ತು ಚಿಕಿತ್ಸೆಗೆ ಪಡೆಯಬೇಕಾದ ಶುಲ್ಕವನ್ನು ಸರ್ಕಾರವೇ ನಿಗದಿ ಮಾಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ‘ಖಾಸಗಿ ಆಸ್ಪತ್ರೆಗಳು ತೆಗೆದುಕೊಳ್ಳಬೇಕಾದ ಪರೀಕ್ಷಾ ದರ, ಚಿಕಿತ್ಸಾ ದರವನ್ನು ಸರ್ಕಾರವೇ ನಿಗದಿಪಡಿಸಲಿದೆ. ಸುಲಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ
ಕ್ರಮ ಕೈಗೊಳ್ಳಲಾಗುವುದು. ರಾಜ್ಯದಾದ್ಯಂತ ಬಹುತೇಕ ಏಕರೂಪದ ಚಿಕಿತ್ಸಾ ದರ ನಿಗದಿಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.