ADVERTISEMENT

ರಾಜ್ಯದಲ್ಲಿ ಒಂದೇ ದಿನ 27.80 ಲಕ್ಷ ಡೋಸ್ ವಿತರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 19:37 IST
Last Updated 17 ಸೆಪ್ಟೆಂಬರ್ 2021, 19:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದೇಶದಾದ್ಯಂತ ಶುಕ್ರವಾರ ಹಮ್ಮಿಕೊಳ್ಳಲಾದಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ರಾಜ್ಯವು ಅಗ್ರ ಸ್ಥಾನ ಪಡೆದಿದ್ದು,27.80 ಲಕ್ಷ ಡೋಸ್‌ಗಳಷ್ಟು (ರಾತ್ರಿ 9.30ರ ವೇಳೆಗೆ) ಲಸಿಕೆಯನ್ನು ವಿತರಿಸಲಾಗಿದೆ.

ಈ ಹಿಂದೆ ಒಂದು ದಿನದಲ್ಲಿ ಗರಿಷ್ಠ 12 ಲಕ್ಷ ಡೋಸ್‌ಗಳನ್ನು ನೀಡಲಾಗಿತ್ತು.

ಇಲ್ಲಿನ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಮೇಳಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಚಾಲನೆ ನೀಡಿದರು.

ADVERTISEMENT

ಒಟ್ಟು 31.75 ಲಕ್ಷ ಡೋಸ್‌ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು.11,648 ಸರ್ಕಾರಿ ಕೇಂದ್ರಗಳು ಹಾಗೂ415 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗಿದೆ. ಕೆಲವು ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಲಸಿಕೆ ನೀಡಲಾಯಿತು. ಒಟ್ಟಾರೆ ಗುರಿಯಲ್ಲಿ ಶೇ 88ರಷ್ಟು ಸಾಧನೆ ಸಾಕಾರವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 4.04 ಲಕ್ಷ ಡೋಸ್‌ಗಳನ್ನು ವಿತರಿಸಲಾಗಿದೆ. ಬೆಂಗಳೂರು ನಗರ,ಶಿವಮೊಗ್ಗ, ಧಾರವಾಡ, ರಾಮನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆ ಶೇ 100ರ ಗುರಿ ದಾಟಿದೆ. 25 ಜಿಲ್ಲೆಗಳು ಶೇ 75ಕ್ಕಿಂತ ಅಧಿಕ ಗುರಿ ಸಾಧಿಸಿವೆ. ಕಲಬುರ್ಗಿ ಹಿಂದೆ ಬಿದ್ದಿದ್ದು, ಶೇ 50 ರಷ್ಟೂ ಗುರಿ ಸಾಧ್ಯವಾಗಲಿಲ್ಲ.

5.12 ಕೋಟಿ ಡೋಸ್‌ಗಳ ವಿತರಣೆ:ಈವರೆಗೆ ನೀಡಲಾದ ಲಸಿಕೆಯ ಒಟ್ಟು ಡೋಸ್‌ಗಳ ಸಂಖ್ಯೆ 5.12 ಕೋಟಿ ದಾಟಿದೆ.3.70 ಕೋಟಿ ಮಂದಿ ಈವರೆಗೆ ಮೊದಲ ಡೋಸ್ ಹಾಗೂ 1.41 ಕೋಟಿ ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

18ರಿಂದ 44 ವರ್ಷದವರಲ್ಲಿ 1.95 ಕೋಟಿ ಮಂದಿ ಮೊದಲ ಡೋಸ್ ಹಾಗೂ 40.94 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.51 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 83.37 ಲಕ್ಷ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.63 ಲಕ್ಷ ಹಾಗೂ ಕೋವಿಡ್ ಮುಂಚೂಣಿ ಯೋಧರಲ್ಲಿ 9.38 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 6.31 ಲಕ್ಷ ಮಂದಿ ಹಾಗೂ 6.26 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.