ADVERTISEMENT

ಕೋವಿಡ್: 1.11 ಲಕ್ಷ ಮಂದಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 16:59 IST
Last Updated 1 ಏಪ್ರಿಲ್ 2021, 16:59 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 45 ರಿಂದ 60 ವರ್ಷದೊಳಗಿನ 50,620 ಮಂದಿ ಸೇರಿದಂತೆ 1.11 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಆರೋಗ್ಯ ಉಪ ಕೇಂದ್ರಗಳು ಸೇರಿದಂತೆ 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ವಿತರಣೆಯ ಗುರಿಯನ್ನು ಆರೋಗ್ಯ ಇಲಾಖೆಯು ಹಾಕಿಕೊಂಡಿತ್ತು. ಆದರೆ, 3,415 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ಬಹುತೇಕರು ಲಸಿಕೆ ಕೇಂದ್ರಗಳಲ್ಲಿಯೇ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆದರು. ಪ್ರತಿ ಕೇಂದ್ರದಲ್ಲಿ 50ರಿಂದ 100 ಮಂದಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. ಲಸಿಕೆ ಪಡೆದವರಲ್ಲಿ ಯಾರಲ್ಲಿಯೂ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಈವರೆಗೆ 39.26 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 5.67 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 3.45 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ 20 ಲಕ್ಷ (20.05 ಲಕ್ಷ) ದಾಟಿದೆ. ಅವರಲ್ಲಿ 5,315 ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ. ಮುಂಚೂಣಿ ಕೋವಿಡ್ ಯೋಧರಲ್ಲಿ2.39 ಲಕ್ಷ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.