ADVERTISEMENT

ಕೋವಿಡ್ ಲಸಿಕೆ: 7 ಕೋಟಿ ಡೋಸ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 21:37 IST
Last Updated 20 ನವೆಂಬರ್ 2021, 21:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ 2.94 ಲಕ್ಷ ಡೋಸ್‌ಗಳನ್ನು ಶನಿವಾರ ವಿತರಿಸಲಾಗಿದೆ. ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7 ಕೋಟಿಯ ಗಡಿ ದಾಟಿದೆ.

4.36 ಕೋಟಿ ಮಂದಿ ಲಸಿಕೆಯ ಮೊದಲ ಡೋಸ್ ಹಾಗೂ 2.65 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ಲಸಿಕೆವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

2021ರ ಜ.16ರಂದು ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಒಂದು ತಿಂಗಳಿಂದ ದಿನವೊಂದಕ್ಕೆ ಸರಾಸರಿ 4 ಲಕ್ಷ ಡೋಸ್‌ಗಳನ್ನು ನೀಡಲಾಗುತ್ತಿದೆ.

ADVERTISEMENT

18 ರಿಂದ 44 ವರ್ಷದೊಳಗಿನವರಲ್ಲಿ 2.46 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.25 ಕೋಟಿ ಮಂದಿ ಎರಡನೇ ಡೋಸ್ಲಸಿಕೆಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.73 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.24 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.64 ಲಕ್ಷ ಹಾಗೂಕೋವಿಡ್ಮುಂಚೂಣಿ ಯೋಧರಲ್ಲಿ 9.42 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 6.93 ಲಕ್ಷ ಮಂದಿ ಹಾಗೂ 8.40 ಲಕ್ಷ ಮಂದಿ ಎರಡೂ ಡೋಸ್ಲಸಿಕೆಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.