ADVERTISEMENT

ಕೋವಿಡ್ ಲಸಿಕೆ: ಪರ್ಯಾಯ ದಿನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 16:15 IST
Last Updated 12 ಅಕ್ಟೋಬರ್ 2021, 16:15 IST

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಲಸಿಕಾ ಕಾರ್ಯಕ್ರಮಕ್ಕೆ ಐದು ದಿನಗಳು ಬಿಡುವು ನೀಡಿ, ಪರ್ಯಾಯ ದಿನಗಳನ್ನು ಗುರುತಿಸಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ಸರ್ಕಾರಕ್ಕೆ ಆಗ್ರಹಿಸಿದೆ.

ಈ ಬಗ್ಗೆ ಸಂಘವು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದೆ. ‘ಕೋವಿಡ್ ನಿಯಂತ್ರಣ ಸಂಬಂಧ ಇದೇ 10 ರಿಂದ 15ರವರೆಗೆ ಲಸಿಕಾ ಕಾರ್ಯಕ್ರಮ ನಡೆಸಲು ಆದೇಶಿಸಲಾಗಿದೆ. ದಸರಾ ಹಬ್ಬ ಇರುವುದರಿಂದ ಸತತ ಐದು ದಿನಗಳು ಬಿಡುವಿಲ್ಲದೇ ಲಸಿಕಾ ಕಾರ್ಯಕ್ರಮ ನಡೆಸುವುದು ಸಮಸ್ಯೆಯಾಗುತ್ತದೆ.ಹಾಗಾಗಿ, ಪರ್ಯಾಯ ದಿನಗಳನ್ನು ನಿಗದಿಪಡಿಸುವಂತೆ ಇಲಾಖೆಯ ವಿವಿಧ ವೃಂದದ ಸಂಘದವರು ಮನವಿ ಮಾಡಿದ್ದಾರೆ’ ಎಂದು ಪತ್ರದಲ್ಲಿ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್ ತಿಳಿಸಿದ್ದಾರೆ.

‘ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಇತರೆ ಕರ್ತವ್ಯದ ದಿನಗಳಂದು ಲಸಿಕಾ ಕಾರ್ಯಕ್ರಮ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.