ADVERTISEMENT

ಕೋವಿಡ್ ಲಸಿಕೆ: ಕರ್ನಾಟಕದಲ್ಲಿ 5.82 ಲಕ್ಷ ಡೋಸ್ ದಾಸ್ತಾನು

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 16:24 IST
Last Updated 10 ಜನವರಿ 2023, 16:24 IST
   

ಬೆಂಗಳೂರು: ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸದ್ಯ 5.82 ಲಕ್ಷ ಡೋಸ್‌ನಷ್ಟು ಕೋವ್ಯಾಕ್ಸಿನ್ ಹಾಗೂ 330 ಡೋಸ್‌ನಷ್ಟು ಕೋವಿಶೀಲ್ಡ್‌ ಲಸಿಕೆ ದಾಸ್ತಾನು ಇದೆ.

ಚೀನಾ ಸೇರಿ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಲಸಿಕೆಯ ಮುನ್ನೆಚ್ಚರಿಕೆ ಡೋಸ್‌ಗೆ ಬೇಡಿಕೆ ಹೆಚ್ಚಳವಾಗಿತ್ತು. ಇದರಿಂದಾಗಿ ಕೋವಿಶೀಲ್ಡ್‌ ಲಸಿಕೆ ಬೆರಳಣಿಕೆಯಷ್ಟು ಡೋಸ್‌ಗಳು ಮಾತ್ರ ಲಭ್ಯವಿದೆ. ಈಗಾಗಲೇ ಆರೋಗ್ಯ ಇಲಾಖೆಯು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಲಸಿಕೆಗೆ ಪ್ರಸ್ತಾವನೆ ಸಲ್ಲಿಸಿದೆ.

‘ಮುಂದಿನ ವಾರದ ವೇಳೆಗೆ 8 ಲಕ್ಷ ಡೋಸ್‌ಗಳಷ್ಟು ಕೋವಿಶೀಲ್ಡ್ ಲಸಿಕೆ ಪೂರೈಕೆಯಾಗಲಿದೆ. ಮೊದಲೆರಡು ಡೋಸ್‌ ಲಸಿಕೆ ಪಡೆದವರಲ್ಲಿ ಹೆಚ್ಚಿನವರಿಗೆ ಕೋವಿಶೀಲ್ಡ್‌ ಲಸಿಕೆ ನೀಡಲಾಗಿದೆ. ಹೀಗಾಗಿ, ಈ ಲಸಿಕೆಗೆ ಬೇಡಿಕೆ ಹೆಚ್ಚಿದ್ದು, ಅದನ್ನು ಆದ್ಯತೆ ಮೇರೆಗೆ ನೀಡಲಾಗುತ್ತಿದೆ’ ಎಂದು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ರಾಜ್ಯ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಈ ತಿಂಗಳು 9 ದಿನಗಳಲ್ಲಿ 1.02 ಲಕ್ಷದಷ್ಟು ಡೋಸ್ ಲಸಿಕೆ ನೀಡಲಾಗಿದೆ. ಡಿಸೆಂಬರ್‌ ತಿಂಗಳಲ್ಲಿ 2.58 ಲಕ್ಷ ಡೋಸ್‌ಗಳಷ್ಟು ಲಸಿಕೆ ವಿತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.