ADVERTISEMENT

ಕೋವಿಡ್: 1.19 ಲಕ್ಷ ಮಂದಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 17:02 IST
Last Updated 19 ಮಾರ್ಚ್ 2021, 17:02 IST

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 3,448 ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, 1.19 ಲಕ್ಷ ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ.

3,488 ಕಡೆ ಕೋವಿಡ್ ಲಸಿಕೆ ವಿತರಣೆಗೆ ಯೋಜನೆ ರೂಪಿಸಲಾಗಿತ್ತು. 40 ಕೇಂದ್ರಗಳಲ್ಲಿ ಕಾರಣಾಂತರಗಳಿಂದ ಲಸಿಕೆ ವಿತರಣೆ ನಡೆದಿಲ್ಲ. ಲಸಿಕೆ ಪಡೆದವರಲ್ಲಿ 88,780 ಲಕ್ಷ ಮಂದಿ ಹಿರಿಯ ನಾಗರಿಕರಾಗಿದ್ದಾರೆ. ಈವರೆಗೆ 21.30 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 5.08 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 3.08 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಲ್ಲಿ 8.70 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸುತ್ತಿರುವವರಲ್ಲಿ 2.11 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಕೋವಿಡ್‌ ಮುಂಚೂಣಿ ಯೋಧರಲ್ಲಿ 1.89 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಅವರಲ್ಲಿ 41,360 ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.