ADVERTISEMENT

ಕೋವಿಡ್‌ ಮೂರನೇ ಅಲೆ: ವೈದ್ಯಕೀಯ ನೆರವಿಗಾಗಿ ಕೇಂದ್ರಕ್ಕೆ ಬೊಮ್ಮಾಯಿ ಮನವಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 9:15 IST
Last Updated 31 ಜುಲೈ 2021, 9:15 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.   

ನವದೆಹಲಿ: ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನಸುಖ್‌ಲಾಲ್‌ ಮಾಂಡವಿಯಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌–19 ಮೂರನೇ ಅಲೆಯ ಸಮರ್ಪಕ ನಿರ್ವಹಣೆ ನಿಟ್ಟಿನಲ್ಲಿ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಮನವಿ ಸಲ್ಲಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.

ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಕೂಡಲೇ 1.50 ಕೋಟಿ ಕೋವಿಡ್‌ ಲಸಿಕೆ ವಿತರಣೆಗೆ ಮನವಿ ಸಲ್ಲಿಸಲಾಗಿದೆ. ಮಾಸಿಕ ಆಗಸ್ಟ್‌ ತಿಂಗಳಲ್ಲಿ 1 ಕೋಟಿ ಲಸಿಕೆ ಹಂಚಿಕೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು, 3ನೇ ಅಲೆ ತಡೆಗಾಗಿ ₹ 800 ಕೋಟಿ ಹಣಕಾಸಿನ ನೆರವು ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆ ಸುರಿದಿರುವ ಕಾರಣ ರೈತರ ರಸಗೊಬ್ಬರದ ಬೇಡಿಕೆ ಪೂರೈಕೆಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದ್ದು, ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.