ADVERTISEMENT

ಕೋವಿಡ್‌: ಎಚ್‌.ಡಿ.ಕುಮಾರಸ್ವಾಮಿ ಆಸ್ಪತ್ರೆಯಿಂದ ಮನೆಗೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 9:22 IST
Last Updated 24 ಏಪ್ರಿಲ್ 2021, 9:22 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ಬೆಂಗಳೂರು: ಕೋವಿಡ್ ಪೀಡಿತರಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ(61) ಶನಿವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಕುಮಾರಸ್ವಾಮಿ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಕಳೆದ ಶನಿವಾರ (ಏ.17) ದೃಢಪಟ್ಟಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಸೋಂಕಿನಿಂದ ಗುಣಮುಖರಾಗಿರುವ ಬಗ್ಗೆ ಟ್ವೀಟ್‌ ಮಾಡಿದ್ದು, 'ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು' ಎಂದಿದ್ದಾರೆ.

ADVERTISEMENT

ಮುಂದಿನ ಎರಡು ವಾರಗಳು ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬಂದ ಅವರ ಆರೋಗ್ಯ ವ್ಯತ್ಯಯವಾಗಿದ್ದರಿಂದಾಗಿ ಬೆಂಗಳೂರಿಗೆ ವಾಪಾಸ್ ಆದವರು ಮನೆಗೆ ಹೋಗದೇ ಹೋಟೆಲ್‌ನಲ್ಲೇ ಉಳಿದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.