ADVERTISEMENT

Covid-19 Karnataka Update: ರಾಜ್ಯದಲ್ಲಿ 1,186 ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಆಗಸ್ಟ್ 2021, 16:07 IST
Last Updated 9 ಆಗಸ್ಟ್ 2021, 16:07 IST
ಬೆಂಗಳೂರಿನ ರೈಲ್ವೆ ನಿಲ್ದಾಣದ ಸಮೀಪ ಕೋವಿಡ್‌ ಪರೀಕ್ಷೆಗಾಗಿ ಪ್ರಯಾಣಿಕರ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಬೆಂಗಳೂರಿನ ರೈಲ್ವೆ ನಿಲ್ದಾಣದ ಸಮೀಪ ಕೋವಿಡ್‌ ಪರೀಕ್ಷೆಗಾಗಿ ಪ್ರಯಾಣಿಕರ ಮೂಗಿನ ದ್ರವ ಮಾದರಿ ಸಂಗ್ರಹಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 24 ಗಂಟೆಗಳ ಅಂತರದಲ್ಲಿ 1,186 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ ಸೋಂಕಿತರಲ್ಲಿ 1,776 ಮಂದಿ ಚೇತರಿಸಿಕೊಂಡಿದ್ದು, 24 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಈವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.19 ಲಕ್ಷ ದಾಟಿದೆ. ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 2.02 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 36,817ಕ್ಕೆ ಏರಿದೆ.

ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 28.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 23,316ಕ್ಕೆ ಇಳಿಕೆಯಾಗಿದೆ.

ADVERTISEMENT

ಬೆಂಗಳೂರಿನಲ್ಲಿ 296 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 273 ಪ್ರಕರಣಗಳು, ಕೊಡಗಿನಲ್ಲಿ 83, ಮೈಸೂರಿನಲ್ಲಿ 82, ಉಡುಪಿಯಲ್ಲಿ 80 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.