ADVERTISEMENT

ಕೋವಿಡ್‌: ಮುಖ್ಯಮಂತ್ರಿ ಬಿಎಸ್‌ವೈ ಆರೋಗ್ಯ ಸ್ಥಿರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 6:26 IST
Last Updated 17 ಏಪ್ರಿಲ್ 2021, 6:26 IST
ಮೊದಲ ಬಾರಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ಸಿಎಂ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಡುವೆ ಕಡತಗಳಿಗೆ ಸಹಿ ಹಾಕಿದ್ದರು–ಸಂಗ್ರಹ ಚಿತ್ರ
ಮೊದಲ ಬಾರಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ಸಿಎಂ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಡುವೆ ಕಡತಗಳಿಗೆ ಸಹಿ ಹಾಕಿದ್ದರು–ಸಂಗ್ರಹ ಚಿತ್ರ   

ಬೆಂಗಳೂರು: ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೋವಿಡ್‌ ದೃಢಪಟ್ಟ ಕಾರಣ ಯಡಿಯೂರಪ್ಪ ಅವರನ್ನು ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದ ತಜ್ಞ ವೈದ್ಯರ ತಂಡ ಮುಖ್ಯಮಂತ್ರಿಯ ಆರೋಗ್ಯ ಸ್ಥಿತಿ ಮೇಲೆ ನಿಗಾ ಇರಿಸಿದೆ.

ವೈದ್ಯರು ಈಗಾಗಲೇ ಮುಖ್ಯಮಂತ್ರಿ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷೆಯಲ್ಲಿ ಎಲ್ಲವೂ ಕೂಡ ಸಾಮಾನ್ಯವಾಗಿದೆ. ಶ್ವಾಸಕೋಶಕ್ಕೆ ಸೋಂಕು ತಗಲುವ ಸಾಧ್ಯತೆಯ ಕಾರಣ ಶ್ವಾಸಕೋಶ ಸಂಬಂಧ ಎಕ್ಸ್​ ರೇ ಮಾಡಲಾಗಿದೆ. ಯಾವುದೇ ತೊಂದರೆ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದೂ ಮೂಲಗಳು ಹೇಳಿವೆ.

ADVERTISEMENT

ಯಡಿಯೂರಪ್ಪ ಅವರ ಮಗಳ ಪದ್ಮಾ, ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ‌ ಡಾ‌. ನಿರಂಜನ್ ಅವರಿಗೂ ಕೋವಿಡ್ ದೃಢಟ್ಟಿದೆ. ಅವರು ಏ.15ರಂದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.