ADVERTISEMENT

Covid-19 Karnataka Update: 24 ಗಂಟೆಗಳಲ್ಲಿ 1,336 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 14:27 IST
Last Updated 17 ನವೆಂಬರ್ 2020, 14:27 IST
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,336 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 2,100 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,64,140 ತಲುಪಿದ್ದು, ಈ ಪೈಕಿ 11,557 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 25,323 ಸಕ್ರಿಯ ಪ್ರಕರಣಗಳಿವೆ.

24 ಗಂಟೆಗಳಲ್ಲಿ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದು, 693 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಅತಿ ಹೆಚ್ಚು 729 ಪ್ರಕರಣಗಳು, ತುಮಕೂರಿನಲ್ಲಿ 89 ಪ್ರಕರಣಗಳು, ಮೈಸೂರಿನಲ್ಲಿ 52 ಪ್ರಕರಣಗಳು, ಬೆಂಗಳೂರು ಗ್ರಾಮಾಂತರದಲ್ಲಿ 40 ಪ್ರಕರಣಗಳು ಹಾಗೂ ಮಂಡ್ಯದಲ್ಲಿ 38 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.