ADVERTISEMENT

Covid-19 Karnataka Update: ರಾಜ್ಯದಲ್ಲಿ ಕೋವಿಡ್‌ ದೃಢಪಟ್ಟ 529 ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 14:02 IST
Last Updated 26 ಜನವರಿ 2021, 14:02 IST
ಕೋವಿಡ್‌ ಲಸಿಕೆಗೆ ಜಾಗೃತಿ ಮೂಡಿಸುವ ಕಲಾಕೃತಿ
ಕೋವಿಡ್‌ ಲಸಿಕೆಗೆ ಜಾಗೃತಿ ಮೂಡಿಸುವ ಕಲಾಕೃತಿ   

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌–19 ದೃಢಪಟ್ಟ 529 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 738 ಮಂದಿ ಗುಣಮುಖರಾಗಿದ್ದು, 4 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.36 ಲಕ್ಷ ದಾಟಿದ್ದು, ಈವರೆಗೂ ಸೋಂಕಿನಿಂದ 9.18 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 12,204 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಪ್ರಸ್ತುತ 6,633 ಪ್ರಕರಣಗಳು ಸಕ್ರಿಯವಾಗಿವೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 276 ಪ್ರಕರಣಗಳು, ತುಮಕೂರಿನಲ್ಲಿ 36 ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 33 ಪ್ರಕರಣಗಳು, ಮೈಸೂರಿನಲ್ಲಿ 26 ಹೊಸ ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.