
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯದಲ್ಲಿ 24 ಗಂಟೆ ಅವಧಿಯಲ್ಲಿ 810 ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.
ಒಟ್ಟು ಪ್ರಕರಣಗಳ ಸಂಖ್ಯೆ 9.21 ಲಕ್ಷ ತಲುಪಿದ್ದು, ಈ ಪೈಕಿ 8.98 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 12,107 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ, 10,893 ಸಕ್ರಿಯ ಪ್ರಕರಣಗಳಿವೆ.
ಭಾನುವಾರ 743 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಪ್ರಸ್ತುತ 186 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 464, ಮೈಸೂರಿನಲ್ಲಿ 40, ಚಿಕ್ಕಬಳ್ಳಾಪುರದಲ್ಲಿ 32, ತುಮಕೂರಿನಲ್ಲಿ 20 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 20 ಮಂದಿಗೆ ಹೊಸದಾಗಿ ಕೋವಿಡ್–19 ದೃಢಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.