ADVERTISEMENT

Covid-19 karnataka Update: ರಾಜ್ಯದಲ್ಲಿ 7,000 ಸಮೀಪ ತಲುಪಿದ ಸೋಂಕು ಪ್ರಕರಣ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 14:01 IST
Last Updated 7 ಏಪ್ರಿಲ್ 2021, 14:01 IST
ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಜನರು ಬೆಂಗಳೂರಿನ ಸಂಜಯನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಕಾಯುತ್ತಿರುವುದು–ಸಂಗ್ರಹ ಚಿತ್ರ
ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಜನರು ಬೆಂಗಳೂರಿನ ಸಂಜಯನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಕಾಯುತ್ತಿರುವುದು–ಸಂಗ್ರಹ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 24 ಗಂಟೆಗಳ ಅಂತರದಲ್ಲಿ 6,976 ಪ್ರಕರಣಗಳು ದಾಖಲಾಗಿವೆ. ಮಂಗಳವಾರಕ್ಕಿಂತಲೂ ಹೆಚ್ಚಿನ ಪ್ರಕರಣಗಳು ಬುಧವಾರ ವರದಿಯಾಗಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ 35 ಮಂದಿ ಸಾವಿಗೀಡಾಗಿದ್ದು, 2,794 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ 4,991 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು 25 ಜನರು ಸಾವಿಗೀಡಾಗಿದ್ದಾರೆ. ರಾಜಧಾನಿಯಲ್ಲಿ ನಿನ್ನೆ 4,266 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಉಳಿದಂತೆ ಮೈಸೂರಿನಲ್ಲಿ 243, ಬೀದರ್‌ನಲ್ಲಿ 214, ತುಮಕೂರಿನಲ್ಲಿ 204, ಕಲಬುರ್ಗಿಯಲ್ಲಿ 205, ದಕ್ಷಿಣ ಕನ್ನಡದಲ್ಲಿ 112, ಬೆಳಗಾವಿಯಲ್ಲಿ 101 ಪ್ರರಕಣಗಳು ವರದಿಯಾಗಿವೆ.

ADVERTISEMENT

353 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 49,254ಕ್ಕೆ ಏರಿಕೆಯಾಗಿದೆ.

ಈವರೆಗೂ ರಾಜ್ಯದಲ್ಲಿ 10.33 ಲಕ್ಷ ಕೋವಿಡ್‌ ದೃಢಪಟ್ಟ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 9.71 ಲಕ್ಷಕ್ಕೂ ಹೆಚ್ಚು ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 12,731 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಈವರೆಗೂ 48,32,382 ಡೋಸ್‌ಗಳಷ್ಟು ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.