ADVERTISEMENT

Covid-19 Karnataka Update: ರಾಜ್ಯದಲ್ಲಿ 22,676 ಪ್ರಕರಣಗಳು ಸಕ್ರಿಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2021, 15:21 IST
Last Updated 10 ಆಗಸ್ಟ್ 2021, 15:21 IST
ಬೆಂಗಳೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರು ಪ್ರಯಾಣಿಕರಿಂದ ಸಂಗ್ರಹಿಸಿದ ಗಂಟಲು/ ಊಗಿನ ದ್ರವ ಮಾದರಿಗಳನ್ನು ಪರೀಕ್ಷೆಗೆ ಪೂರಕವಾಗಿ ಅಣಿಗೊಳಿಸುತ್ತಿರುವುದು. ಚಿತ್ರ: ಪುಷ್ಕರ್‌ ವಿ.
ಬೆಂಗಳೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಕಾರ್ಯಕರ್ತರೊಬ್ಬರು ಪ್ರಯಾಣಿಕರಿಂದ ಸಂಗ್ರಹಿಸಿದ ಗಂಟಲು/ ಊಗಿನ ದ್ರವ ಮಾದರಿಗಳನ್ನು ಪರೀಕ್ಷೆಗೆ ಪೂರಕವಾಗಿ ಅಣಿಗೊಳಿಸುತ್ತಿರುವುದು. ಚಿತ್ರ: ಪುಷ್ಕರ್‌ ವಿ.   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 1,338 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 31 ಮಂದಿ ಸಾವಿಗೀಡಾಗಿದ್ದು, 1,974 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 29.21 ಲಕ್ಷ ದಾಟಿದ್ದು, ಈ ಪೈಕಿ 28.61 ಲಕ್ಷಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 36,848 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 22,676 ಪ್ರಕರಣಗಳು ಸಕ್ರಿಯವಾಗಿರುವುದಾಗಿ ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.

ಕೋವಿಡ್‌ ಖಚಿತ ಪ್ರಕರಣಗಳ ಪ್ರಮಾಣ ಶೇ.1.05 ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.2.31ರಷ್ಟಿದೆ.

ADVERTISEMENT

ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲಿ 378 ಪ್ರಕರಣಗಳು, ಬೆಂಗಳೂರಿನಲ್ಲಿ 315 ಪ್ರಕರಣಗಳು, ಚಿಕ್ಕಮಗಳೂರಿನಲ್ಲಿ 93, ಉಡುಪಿಯಲ್ಲಿ 92, ಮೈಸೂರಿನಲ್ಲಿ 71 ಹಾಗೂ ಉತ್ತರ ಕನ್ನಡದಲ್ಲಿ 61 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.