ADVERTISEMENT

Covid-19 Karnataka Update: 1,669 ಹೊಸ ಪ್ರಕರಣ, 22 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಆಗಸ್ಟ್ 2021, 14:20 IST
Last Updated 13 ಆಗಸ್ಟ್ 2021, 14:20 IST
ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ. –ಪ್ರಜಾವಾಣಿ ಚಿತ್ರ
ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ. –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ 1,669 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,26,401ಕ್ಕೆ ಏರಿಕೆಯಾಗಿದೆ. ಆ ಪೈಕಿ 36,933 ಮಂದಿ ಸಾವಿಗೀಡಾಗಿದ್ದಾರೆ.

ಇಂದು 1,672 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 28,66,739 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,728 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 425 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 390, ಉಡುಪಿ 115, ಹಾಸನ 113, ಮೈಸೂರು 106, ಕೊಡಗು 73, ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಹೊಸ ಪ್ರಕರಣಗಳು ವರದಿಯಾಗಿವೆ.

ADVERTISEMENT

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.98 ರಷ್ಟಿದ್ದು, ಮರಣ ಪ್ರಮಾಣ ಶೇ.1.31 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.