ADVERTISEMENT

Covid-19 Karnataka Update: ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ

ರಾಜ್ಯದಲ್ಲಿಂದು 1,632 ಹೊಸ ಪ್ರಕರಣ, 25 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2021, 13:41 IST
Last Updated 14 ಆಗಸ್ಟ್ 2021, 13:41 IST
ಬೆಂಗಳೂರು ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಸಿದರು. –ಪ್ರಜಾವಾಣಿ ಚಿತ್ರ
ಬೆಂಗಳೂರು ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ ನಡೆಸಿದರು. –ಪ್ರಜಾವಾಣಿ ಚಿತ್ರ   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 411 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 1,632 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,28,033 ಕ್ಕೆ ಏರಿಕೆಯಾಗಿದೆ. ಆ ಪೈಕಿ 36,958 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಇಂದು 1,612 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 28,68,351 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 22,698 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 377 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಉಡುಪಿ 169, ಮೈಸೂರು 112, ಹಾಸನ 97, ಕೊಡಗು 77, ಚಿಕ್ಕಮಗಳೂರು ಜಿಲ್ಲೆಯಲ್ಲಿ 53 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.04 ರಷ್ಟಿದ್ದು, ಮರಣ ಪ್ರಮಾಣ ಶೇ.1.53 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.