ADVERTISEMENT

ಕೋವಿಡ್ ಮತ್ತೆ ಹೆಚ್ಚಳ: ಬೆಂಗಳೂರಿನಲ್ಲಿ 791 ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 3:05 IST
Last Updated 17 ಜೂನ್ 2022, 3:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ 791 ಸೇರಿದಂತೆ ರಾಜ್ಯದಲ್ಲಿ 833 ಮಂದಿ ಹೊಸದಾಗಿ ಕೋವಿಡ್ ಪೀಡಿತರಾಗಿದ್ದಾರೆ.ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 4 ಸಾವಿರದ ಗಡಿ (4,371) ದಾಟಿದೆ.

ಇಷ್ಟು ಸಂಖ್ಯೆಯಲ್ಲಿ ದೈನಂದಿನ ಪ್ರಕರಣಗಳು ಮೂರುವರೆ ತಿಂಗಳ ಹಿಂದೆ ವರದಿಯಾಗಿದ್ದವು. ಒಂದು ದಿನದ ಅವಧಿಯಲ್ಲಿ 23,990 ಮಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 3.47 ರಷ್ಟು ವರದಿಯಾಗಿದೆ. ಸೋಂಕಿತರಲ್ಲಿ ಬೆಳಗಾವಿಯ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅವರಿಗೆ ಕ್ಷಯ ರೋಗವಿತ್ತು.

11 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ 12 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣ ಒಂದಂಕಿಯಲ್ಲಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,199ಕ್ಕೆ ಏರಿಕೆಯಾಗಿದೆ. ಯಾದಗಿರಿ, ವಿಜಯಪುರ ಸೇರಿದಂತೆ 8 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳಿಲ್ಲ.

ADVERTISEMENT

ರಾಜ್ಯದಲ್ಲಿ ಈವರೆಗೆಕೋವಿಡ್ಪೀಡಿತರಾದವರ ಒಟ್ಟು ಸಂಖ್ಯೆ 39.58 ಲಕ್ಷ ದಾಟಿದೆ. 39.14 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,068ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.